ಕಲಬುರಗಿ: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿಅವರ ತಾಯಿ ಹಿಟ್ ಆ್ಯಂಡ್ ರನ್ಗೆ ಬಲಿಯಾಗಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಅರವಿಂದ ಅರಳಿ ಅವರ ತಾಯಿ ಸುಮಿತ್ರಾಗೆ ಬೈಕ್ ಬಂದು ಗುದ್ದಿದೆ. ಪರಿಣಾಮ ಸುಮೀತ್ರಾಬಾಯಿ (75) ಮೃತಪಟ್ಟಿದ್ದಾರೆ.
ಬೀದರ್ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದ ಸುಮಿತ್ರಾ ಅವರು, ಟೊಯೋಟಾ ಶೋರೂಂ ಬಳಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ಬೈಕ್ ಬಂದು ಡಿಕ್ಕಿ ಹೊಡಿದೆ. ಬೈಕ್ಗುದ್ದಿದ ರಭಸಕ್ಕೆ ಸುಮಿತ್ರಾ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.