ಬೆಂಗಳೂರು:- ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖಾ ತಂಡ ಎಸ್ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಇನ್ನೂ ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.