ಬೆಂಗಳೂರು: ದೇಶದಲ್ಲಿ ಕೋವಿಡ್ ಅರ್ಭಟ ಯಾಕೋ ನಿಲ್ಲವ ಲಕ್ಷಣ ಕಾಣ್ತಿಲ್ಲ.ಅಲೆಗಳ ಮೇಲೆ ಅಲೆಗಳು ಬಂದು ಈಗಾಗಲೇ ಜನರನ್ನ ಹಿಂಡಿ ಹಿಪ್ಪೆ ಮಾಡಿರೋ ಈ ಕ್ರೂರಿ ಇದೀಗ ಮತ್ತಷ್ಟು ಆತಂಕ ಹುಟ್ಟಿಸಿದೆ. ದೇಶದ ಕೆಲ ರಾಜ್ಯಗಳಲ್ಲಿ ಸೈಲೆಂಟ್ ಆಗಿ ಕೊರೋನಾ ಉಲ್ಬಣವಾಗ್ತಿರೋದು ಮತ್ತೆ ಆ ದಿನಗಳು ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಕೇರಳದಲ್ಲಿ ಕೊರೋನಾ ನರ್ತನದಿಂದ ಅಲರ್ಟ್ ಆಗಿರೋ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹಾಗಾದ್ರೆ ನಾಡಿದ್ದು ಸಲಹಾ ಸಮಿತಿ ಏನೆಲ್ಲಾ ಸಲಹೆ ನೀಡ್ತಾರೆ ಬನ್ನಿ ಹೇಳ್ತೀವಿ
ದೇಶದಲ್ಲಿ ಕೊರೋನಾ ಹೆಸರು ಕೇಳಿದ್ರೆ ಸಾಕು ಜನ ಬೆಚ್ಚಿಬೀಳ್ತಾರೆ. ಯಾಕೆಂದ್ರೆ ಅಲೆಗಳ ಮೇಲೆ ಅಲೆಗಳಾಗಿ ಬಂದು ಜನರನ್ನ ಹಿಂಡಿ ಹಿಪ್ಪೆ ಮಾಡಿದೆ. ಕಳೆದ ಎರಡು ವರ್ಷದಿಂದ ಮರೆಯಾಗಿದ್ದ ಡೆಡ್ಲಿ ಕ್ರೂರಿ ಮತ್ತೆ ವಕ್ಕರಿಸಿದೆ.ಕಳೆದ ಕೆಲ ದಿನದಿಂದ ಕೇರಳ ತಮಿಳುನಾಡು ಸೇರಿ ಹಲವೆಡೆ ಕೊರೊನಾ ಕೇಸ್ ಗಳ ಸಂಖ್ಯೆ ಉಲ್ಬಣಗೊಂಡಿದೆ.ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಹೊಸ ಸಬ್ ವೇರಿಯಂಟ್ ಜೆಎನ್-1 ಇದೀಗ ಭಾರತದಲ್ಲೂ ಪತ್ತೆಯಾಗಿದ್ದು, ದೇಶದೆಲ್ಲೆಡೆ ಆತಂಕ ಮನೆ ಮಾಡಿದೆ.
ಹೌದು..ಕೇರಳದಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದ್ದು, ಕರ್ನಾಟಕದಲ್ಲೂ ಆತಂಕದ ಕಾರ್ಮೋಡ ಕವಿಯ ತೊಡಗಿದೆ. ಕೇರಳದಲ್ಲಿ ಕೇಸ್ ಹೆಚ್ಚಳದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು,ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ನಿನ್ನೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿರೋ ಆರೋಗ್ಯ ಸಚಿವರು ಮುಂದಿನ 3 ತಿಂಗಳಿಗೆ ಅವಶ್ಯಕತೆ ಇರುವಷ್ಟು ಟೆಸ್ಟಿಂಗ್ ಕಿಟ್ಟನ್ನ ಕರ್ನಾಟಕ ಮೆಡಿಕಲ್ ಕಾರ್ಪೋರೆಶನ್ನಿಂದ ಖರೀದಿ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.ಇನ್ನೂ ಮಂಗಳವಾರ ಡಾ.ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ, ತಜ್ಞರಿಂದ ಸಲಹೆಗಳನ್ನು ಪಡೆಯಲು ಮುಂದಾಗಿದ್ದಾರೆ. ಕೋವಿಡ್ ಮಾರ್ಗಸೂಚಿ ಹೊರಡಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ.