ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು.
ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರ ಆಯಾ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡುತ್ತಿದೆ. ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಅನುದಾನ, ಪರಿಹಾರ, ಆರ್ಥಿಕ ನೆರವಿನ ಬಗ್ಗೆ ಸದ್ಯದಲ್ಲೇ ನಾವು ಲೆಕ್ಕ ಕೊಡುತ್ತೇವೆ ಎಂದು ಹೇಳಿದರು. ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ ಎಮದರು.