ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ನೀಡಬೇಡಿ. ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ ಅಂತಾ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.
ಇಂದು ವಿಜಯೇಂದ್ರ ಅವರನ್ನು ರೇಣುಕಾಚಾರ್ಯ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಮಾಧ್ಯಮಗಳಲ್ಲಿ ಮಾತಾಡಿ ಗೊಂದಲ ಮೂಡಿಸದಂತೆ ಬಿಜೆಪಿ ರಾಜ್ಯಾಧ್ಯಕ್ಷ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತಾಡದೇ ರೇಣುಕಾಚಾರ್ಯ ಅವರು ಬಿಜೆಪಿ ಕಚೇರಿಯಿಂದ ಹೊರಟಿದ್ದಾರೆ. ಈ ವೇಳೆ ಏನೂ ಮಾತಾಡದಂತೆ ಸೂಚಿಸಿದ್ದಾರೆ ಎಂದು ಹೇಳಿ ಹೋಗಿದ್ದಾರೆ.
ಈ ಹಿಂದೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಕೆಲ ನಾಯಕರ ವಿರುದ್ಧ ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡುತ್ತಿದ್ದರು. ರೇಣುಕಾಚಾರ್ಯ ಹೇಳಿಕೆಗಳಿಂದ ಕೆಲ ಅಸಮಾಧಾನಿತರು ಕೆರಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಕರೆದು ಇಂದು ಬಿವೈ ವಿಜಯೇಂದ್ರ ತಿಳಿ ಹೇಳಿದ್ದಾರೆ ಎನ್ನಲಾಗಿದೆ