ಬೆಂಗಳೂರು:- ಕಳೆದ ಕೆಲವು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಮಳೆಯಾಗಿತ್ತು. ಆದರೆ ಇದೀಗ ಮಳೆ ದೂರವಾಗಿತ್ತು. ಚಳಿ ಆರಂಭವಾಗಿದೆ. ಡಿಸೆಂಬರ್ 21ರ ಗುರುವಾರ ಬೆಳಗ್ಗೆ 8.30ರ ವರೆಗೆ ದಾಖಲಾಗಿರುವ ವರದಿಯ ಪ್ರಕಾರ ರಾಜ್ಯಾದ್ಯಂತ ಒಣ ಹವೆ ಮುಂದುವರಿಸಿದೆ.
ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಹವಾಮಾನ ವರದಿಯ ಪ್ರಕಾರ ಕರ್ನಾಟಕದಲ್ಲಿ ಚಂಡಮಾರುತ ಸೇರಿದಂತೆ ಯಾವುದೇ ರೀತಿಯ ಮಳೆಯ ಭೀತಿ ಇಲ್ಲ. ಪರಿಣಾಮವಾಗಿ ಭಾರಿ ಮಳೆ, ಗುಡುಗು ಸಹಿತ ಮಳೆ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆಯೂ ಇಲ್ಲ ಅಂತ ಹೇಳಿದೆ.
ಇವತ್ತು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಬೆಳಗಿನ ಜಾನ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ. ನಾಳೆ ಡಿಸೆಂಬರ್ 23 ಮತ್ತು ನಾಡಿದ್ದು ನಗರದಲ್ಲಿ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.