ಬೆಂಗಳೂರು:- ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮೊದಲನೇ ಪತ್ನಿ ಮತ್ತು ಆಕೆಯ ಪುತ್ರಿಯರಿಗೆ ಶೇ.50 ಕುಟುಂಬ ಪಿಂಚಣಿ ಮಂಜೂರು ಮಾಡುವಂತೆ ನೈಋತ್ಯ ರೈಲ್ವೆಗೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಾವನ್ನಪ್ಪಿದ ರೈಲ್ವೆ ಉದ್ಯೋಗಿಯ 2ನೇ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಭಾಗಶಃ ಪುರಸ್ಕರಿಸದೆ.
ಪಿಂಚಣಿ ಪಾವತಿಸಲು ಯಾವೆಲ್ಲ ನಿಯಮಗಳು ಅನ್ವಯಿಸಲಿವೆಯೋ ಅವುಗಳನ್ನು ಅನ್ವಯಿಸಲಾಗುವುದು. ಉದ್ಯೋಗಿಯ ಹಕ್ಕುಗಳು ಅಥವಾ ಅವರ ಕುಟುಂಬವು ಪಿಂಚಣಿ ನಿಯಮವನ್ನು ಅವಲಂಬಿಸಿರುತ್ತದೆ. ನಿಯಮಗಳು ಇಲ್ಲದಿದ್ದರೆ ಪಿಂಚಣಿ ಇಲ್ಲ. ಒಂದೊಮ್ಮೆ ನಿಯಮಗಳು ಇದ್ದರೆ ಪಿಂಚಣಿಯನ್ನು ನಿಯಮದ ಪ್ರಕಾರ ಪಾವತಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.