ನವದೆಹಲಿ: ಲೋಕಸಭೆಯಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಇನ್ನು ಬೇರೆಯವರಿಗೆ ರಕ್ಷಣೆ ಹೇಗೆ ಎಂದು ಪ್ರಶ್ನೆ ಮಾಡಿದೆವು. ನಿಯಮಗಳನ್ನು ಗಾಳಿಗೆ ತೂರಿ ಅಮಾನತು ಮಾಡಿದರು. ಇದೊಂದು ದುರ್ದೈವದ ಸಂಗತಿ ಎಂದು ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇವಸ್ಥಾನದೊಳಗೆ ಕೆಲವರು ಅಕ್ರಮವಾಗಿ ದಾಳಿ ಮಾಡಿದ್ದಾರೆ. ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳು ಮಾತನಾಡಬೇಕು. ಮತ್ತು ತನಿಖೆಯಲ್ಲಿ ಪಾಸ್ ನೀಡಿದವರನ್ನು ಒಳಪಡಿಸಬೇಕು ಎಂದು ಆಗ್ರಹಿಸಿದ್ದೇವೆ ಎಂದರು.
ಆಡಳಿತ ಪಕ್ಷದವರು ತಮ್ಮ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಹಿಂದೆ ಬಿಜೆಪಿ ನಾಯಕರು ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಹಿಂದೆ ನಮ್ಮನ್ನು ವ್ಯಂಗ್ಯ ಮಾಡುವಾಗ ಬಿಜೆಪಿ ನಾಯಕರು ಎಂಜಾಯ್ ಮಾಡಿದ್ದಾರೆ ಎಂದರು.