ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಬೆಟ್ಟಕೋಟೆ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸರ್ಕಾರಿ ಶಾಲೆ ಮಕ್ಕಳಿಗೂ ಕೋರೋನಾ ಆತಂಕ ಹೆಚ್ಚಾಗಿದೆ.
ಕೋವಿಡ್ ಪಾಸಿಟೀವ್ ಬಂದ ಹಿನ್ನೆಲೆ ಶಾಲಾ ಮಕ್ಕಳಿಗೆ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ RTPCR ಟೆಸ್ಟ್ ಮಾಡಲಾಗುತ್ತಿದೆ. ಇದುವರೆಗೆ
99 ಜನ ಮಕ್ಕಳ ಗಂಟಲು ದ್ರವ ಸಂಗ್ರಹಿಸಲಾಗಿದೆ.
ಈ ಪರೀಕ್ಷೆಯಲ್ಲಿ ಇದುವರೆಗೂ ಯಾವುದೇ ಮಕ್ಕಳಲ್ಲಿ ಕಂಡು ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ ಎಂದು ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿಗಳಾದ ಸಂಜಯ್ ಮಾಹಿತಿ ನೀಡಿದ್ದಾರೆ.