ಬೆಂಗಳೂರು : ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.