ಬೆಂಗಳೂರು, ಡಿಸೆಂಬರ್ 27; ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಾಂಕನ (SA-2) ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಕಾರ್ಯನಿರ್ವಾಹಕ ನಿರ್ದೇಶಕರು ಕೆಎಸ್ಕ್ಯುಎಎಸಿ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ 2023-24ನೇ ಸಾಲಿನಲ್ಲಿ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಾಂಕನ (SA-2)ದ ತಾತ್ಕಾಲಿಕ ವೇಳಾಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.
2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ (Summative Assessment-(SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ ಎಂದು ಹೇಳಿದೆ.
ವೇಳಾಪಟ್ಟಿ; ವೆಬ್ಸೈಟ್ನಲ್ಲಿ ಪ್ರಕಟಿಸಿದಂತೆ 2024ರ ಮಾರ್ಚ್ 11 ರಿಂದ 18ರ ತನಕ ಪರೀಕ್ಷೆಗಳು ನಡೆಯಲಿವೆ. 5ನೇ ತರಗತಿಗೆ ಮಾರ್ಚ್ 11 ರಿಂದ 14ರ ತನಕ ಪರೀಕ್ಷೆ ಇದೆ. ಮಾ.11 ಪ್ರಥಮ ಭಾಷೆ ಕನ್ನಡ, ಮಾ. 12 ದ್ವಿತೀಯ ಭಾಷೆ ಇಂಗ್ಲಿಶ್, ಮಾ.13 ಪರಿಸರ ಅಧ್ಯಯನ ಮತ್ತು ಮಾ. 14ರಂದು ಗಣಿತ ಪರೀಕ್ಷೆ ನಡೆಯಲಿದೆ. ಈ ಎಲ್ಲಾ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ತನಕ ನಡೆಯಲಿವೆ. 8 & 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 11ರಂದು ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲೀಶ್, ಮಾ. 13 ತೃತೀಯ ಭಾಷೆ ಹಿಂದಿ, ಮಾ.14 ಗಣಿತ, ಮಾ.15 ವಿಜ್ಞಾನ, ಮಾ.16 ಸಮಾಜ ವಿಜ್ಞಾನ ಮತ್ತು ಮಾ.18 ದೈಹಿಕ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳು ಸಹ ಮಧ್ಯಾಹ್ನ 2.30 ರಿಂದ 5 ಗಂಟೆಯ ತನಕ ನಡೆಯುತ್ತವೆ. 2024ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬುಧವಾರ ಸಂಜೆ ಪ್ರಕಟಿಸಲಿದೆ. ಮಂಡಳಿಯ ಪ್ರಶ್ನೆ ಪತ್ರಿಕೆಯನ್ನು ತಯಾರು ಮಾಡಿ ಬಿಇಒಗಳಿಗೆ ಕಳಿಸುತ್ತದೆ. ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮಗೆ ವ್ಯಾಪ್ತಿಯ ಶಾಲೆಗಳಿಗೆ ವಿತರಣೆ ಮಾಡಲಾಗುತ್ತದೆ.