ಮಜಾಭಾರತ, ಗಿಚ್ಚಿ ಗಿಲಿಗಿಲಿ ನಟಿ ಪ್ರಿಯಾಂಕಾ ಕಾಮತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ಅಮಿತ್ ನಾಯಕ್ ಜೊತೆ ಪ್ರಿಯಾಂಕಾ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ನವಜೋಡಿಗೆ ಕಿರುತೆರೆ ನಟ-ನಟಿಯರು ಆಗಮಿಸಿ ಶುಭಹಾರೈಸಿದ್ದಾರೆ
ಕಳೆದ ಎರಡು ದಿನಗಳಿಂದ ಮೆಹೆಂದಿ ಶಾಸ್ತ್ರ, ಹಳದಿ ಶಾಸ್ತ್ರ ಮದುವೆ ಕುರಿತ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿವೆ. ಇದೀಗ ದಾಂಪತ್ಯ ಜೀವನಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ಕುರಿತ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.
ಅಮಿತ್- ಪ್ರಿಯಾಂಕಾ ಕಳೆದ ಜನವರಿಯಲ್ಲಿ ಪುತ್ತೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಾದ ನಂತರದಲ್ಲಿ ಏಳು-ಬೀಳಿನಲ್ಲಿ ಇವರಿಬ್ಬರು ಒಟ್ಟಿಗೆ ಸಾಥ್ ನೀಡಿದ್ದರು. ಇದೀಗ ಹೊಸ ಬಾಳಿಗೆ ನವಜೋಡಿ ಕಾಲಿಟ್ಟಿದ್ದಾರೆ.
ಅಮಿತ್ ನಾಯಕ್ ಮೂಲತಃ ಕುಂದಾಪುರದವರು. ಕಳೆದ ಒಂದು ವರ್ಷದಿಂದ ಈ ಜೋಡಿ ಸಾಕಷ್ಟು ಕಡೆ ಪ್ರವಾಸ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿತ್ತು.