ಮೈಸೂರು, ಡಿಸೆಂಬರ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಪ್ರತಾಪ ಸಿಂಹ ವಿರುದ್ಧ ನಗರದ ದೇವರಾಜ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.
ನಾನು ಸೋಮಾರಿಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಪ್ರತಾಪ್ ಸಿಂಹ ಮೈಸೂರಿನ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಮಾತನಾಡಿದ್ದ ಅವರು, ನಾನು ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಸೋಮಾರಿಸಿದ್ದನ ರೀತಿ ಸುಮ್ಮನೆ ಕುಳಿತು ಜಾತಿ ರಾಜಕಾರಣ ಮಾಡಿಲ್ಲ. ಹೀಗಾಗಿ ನಾನೇ ಟಾರ್ಗೆಟ್ ಎಂದು ಆರೋಪಿಸಿದರು. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ? ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಈ ರೀತಿ ದ್ವೇಷದ ರಾಜಕಾರಣ ಮಾಡಬೇಡಿ. ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ ಎಂದು ಹೇಳಿದರು.