ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಶಿಕ್ಷೆ ಪ್ರಕಟವಾಗಿದ್ದು 6 ಕೋಟಿ 96 ಲಕ್ಷದ 70 ಸಾವಿರ ದಂಡ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹಾಗೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶ ಕೂಡ ನೀಡಲಾಗಿದೆ.
ದಂಡದ ಹಣದಲ್ಲಿ 6.96,60,000 ರೂಪಾಯಿ ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶ ಹೊರಡಿಸಿದ್ದು ಉಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಆದೇಶ ಕೊಟ್ಟಿದೆ.
ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.
ಈ ವೇಳೆ ದೂರುದಾರ ಕಂಪೆನಿಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು 2011 ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು ಹಾಗೆ ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್ ಆದ ಕಾರಣ ಕೇಸ್ ದಾಖಲು ಮಾಡಲಾಗಿತ್ತು
ಕೋರ್ಟ್ ನಲ್ಲಿ ಕೇವಲ 50 ಲಕ್ಷ ನೀಡಿ ಉಳಿದ ಹಣ ಪಾವತಿಸಿರಲಿಲ್ಲ ಜ.30 ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದರು ಆದರೆ ಮುಚ್ಚಳಿಕೆ ಒಪ್ಪಲು ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯಾಕಂದರೆ ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ ಹೀಗಾಗಿ ಮನವಿ ತಿರಸ್ಕರಿಸಿ ಆದೇಶ ಹೊರಡಿಸಿದ ಜಡ್ಜ್ ಜೆ.ಪ್ರೀತ್