ಬೆಂಗಳೂರು:- ನಗರದ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ಮೂಲಕ ಯುವ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಭಾನುವಾರ ಮಧ್ಯರಾತ್ರಿ ಬರಮಾಡಿಕೊಂಡರು.
ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ನ ಪಬ್ಗಳು, ಹೋಟೆಲ್ಗಳು ತುಂಬಿ ತುಳುಕಿದವು. ಇನ್ನು ರಸ್ತೆಗಳಲ್ಲಿ ಯುವಕ-ಯುವತಿಯರು ರಾತ್ರಿಯಿಡೀ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಜನಸಂದಣಿ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ ಮಾಡಲಾಗಿತ್ತು. ಬ್ರಿಗೇಡ್ ರಸ್ತೆಯಲ್ಲಿ ತಳ್ಳಾಟ ನೂಕಾಟ ಹೆಚ್ಚಾಗಿದ್ದರಿಂದ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಸಿಕ್ಕಿಬಿದ್ದ ಮೊಬೈಲ್ ಕಳ್ಳ
ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದವನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕುಡಿದು ಮೊಬೈಲ್ ಕಳ್ಳತನಕ್ಕೆ ಕಳ್ಳ ಯತ್ನಿಸಿದ್ದಾನೆ. ಹೀಗಾಗಿ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದರು. ಹೀಗಾಗಿ ಆತ ತನ್ನನ್ನು ಬಿಟ್ಟುಬಿಡುವಂತೆ ಕೈಮುಗಿದು ಬೇಡಿಕೊಂಡಿದ್ದು ಕಂಡುಬಂತು. ನಂತರ ಆತನಿಂದ ಮೊಬೈಲ್ ಪಡೆದು ಯುವಕನಿಗೆ ಮರಳಿಸಲಾಗಿದೆ.