ಬೆಂಗಳೂರು:- ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ’ ಎಂದು ಹೇಳಿದ್ದಾರೆ.