ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತವಾಗಿದ್ದು, ರಾಜ್ಯದ ಕರಾವಳಿ ಭಾಗ ಹಾಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೇ ಹವಾಮಾನ ಇಲಾಖೆ ಕೂಡ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗಿನಲ್ಲಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗ್ತಿದೆ. ಕೆಲವು ಭಾಗಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದರೆ, ಕಾರವಾರ, ಮಂಗಳೂರು ಭಾಗದಲ್ಲಿ ಮಳೆ ಜೋರಾಗಿ ಬಂದಿದೆ.
ಇನ್ನು ನಿನ್ನೆಯೇ ಕರ್ನಾಟಕ ಹವಾಮಾನ ಇಲಾಖೆ ಮಳೆ ಬೀಳುವ ಎಚ್ಚರಿಕೆಯನ್ನು ನೀಡಿತ್ತು. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಭಾರೀ ಮಳೆ ಬೀಳಲಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಜೊತೆಗೆ ಬೆಂಗಳೂರು, ಚಾಮರಾಜನಗರ, ಮೈಸೂರು ಜಿಲ್ಲೆಯಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 60 ಗಂಟೆಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.