ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಎಂದಿನಂತೆ ಚಳಿಯ ವಾತಾವರಣ ಮುಂದುವರಿಯಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದ್ದು, ಮತ್ತೆ ರಾತ್ರಿ ಹೊತ್ತಿಗೆ ಚಳಿ ಆವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಹಾಗೂ ಗುರುವಾರ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆಯಾಗಲಿದೆ.
ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು,ಬೆಳಗಿನ ಜಾವ ದಟ್ಟ ಮಂಜು ಕವಿದಿರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.