ಬೆಂಗಳೂರು : ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಇಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದಂತೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಸೇರಿಂದ ಇನ್ನಿತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೆ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.