ಹಲವು ದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ವರುಣನ ಸಿಂಚನ ಶುರುವಾಗಿದೆ. ನಗರದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಎಲ್ಲಾ ಕಡೆಗಳಲ್ಲೂ ಮೋಡ ಕವಿದ ವಾತಾವರಣ ಇದೆ.
ಮುಂದಿನ 24 ತಾಸುಗಳ ಕಾಲ ನಗರದಲ್ಲಿ ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆ ಶ್ರೀಲಂಕಾದ ದಕ್ಷಿಣ ಭಾಗದಿಂದ ತಮಿಳುನಾಡಿನ ಉತ್ತರ ಕರಾವಳಿ ಕಡೆಗೆ ಸೈಕ್ಲೋನ್ ಎದ್ದಿದೆ.
ತಮಿಳುನಾಡು ಕರಾವಳಿಯ ಉತ್ತರ ಭಾಗದಲ್ಲಿ ಸಮುದ್ರ ಮಟ್ಟದಿಂದ 900ಮೀಟರ್ ಎತ್ತರದಲ್ಲಿ ಹಾದು ಹೋಗಲಿರುವ ಸೀ ಟ್ರಫ್ ಹೋಗಲಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆ ಸಾಧ್ಯತೆ ಇದೆ. ಇನ್ನು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.