ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದರಂತೆ ಮುಂದುವರೆಯುತ್ತೇನೆ ಎಂದು ಎಂಟಿಬಿ ನಾಗರಾಜ್ ಅವರು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು, ಬಿಡುವುದು ಪಕ್ಷ ನಿರ್ಧಾರ ಮಾಡುತ್ತದೆ. ಪಕ್ಷದ ವರಿಷ್ಠರು ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ. ಲೋಕಸಭಾ ಎಲೆಕ್ಷನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರಲು ವಿಜಯೇಂದ್ರ ಸಂಕಲ್ಪ ಮಾಡಿದ್ದಾರೆ. ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶ ಬಲಯುತವಾಗಿದೆ. ಅದರ ಭಾಗವಾಗಿ ಸೌಹಾರ್ದಯುತದಿಂದ ಮನೆಗೆ ಬಂದು ಭೇಟಿಯಾಗಿದ್ದಾರೆ ಎಂದು ಹೇಳಿದರು.