ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ,ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 23.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.