ಬೆಂಗಳೂರು:- ರಾಜ್ಯದಲ್ಲಿ ಇಂದು 252 ಕೊರೋನ ಸೋಂಕು ದೃಢಪಟ್ಟಿದೆ. ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. 441 ಜನರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 7359 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 18 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1031ಕ್ಕೆ ಏರಿಕೆಯಾಗಿದೆ. ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ ಶೇ.3.42 ರಷ್ಟು ದಾಖಲಾಗಿದೆ.
ಬಳ್ಳಾರಿ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 252 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 6, ಬೆಂಗಳೂರು ನಗರ 172, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 3, ಧಾರವಾಡ 6, ಗದಗ 3, ಹಾಸನ 20, ಕಲಬುರಗಿ 4, ಕೊಡಗು 3, ಕೋಲಾರ 1, ಮೈಸೂರು 8, ರಾಯಚೂರು 6, ರಾಮನಗರ 3, ವಿಜಯನಗರ ಜಿಲ್ಲೆಯಲ್ಲಿ 7 ಪ್ರಕರಣ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.