ಬೆಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ಉದ್ಘಾಟನಾ ಸಮಾರಂಭ ನಡೆಯಿತು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವಾಗಿದ್ದು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭಾಗಿಯಾಗಿದ್ದರು.
ಹಾಗೆ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿಗಳಾದ ಶ್ರೀ.ಡಿ.ಕೆ.ಶಿವ ಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ ಉಪಸ್ಥಿತರಿದ್ದರು.
ಈ ವೇಳೆ ರಸ್ತೆ ಸುರಕ್ಷತೆ ಮಾಸ ಜಾಗೃತಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಭಾಗವಾಗಿ ಈ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ.
ಈ ವೇಳೆ ಟಿ.ಎ.ಶರವಣ ಅವರು ಮಾತನಾಡಿ, ಜೀವ ಅಮೂಲ್ಯವಾದುದು. ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯ ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕು. ಪ್ರತಿ ಜೀವವೂ ಅಮೂಲ್ಯವೇ. ಅಫಘಾತಗಳು ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಕರೆ ನೀಡಿದರು.