ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಚಾಟಿ ಬೀಸಿದರು.
ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ..? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ..? ಸಂಸ್ಕೃತಿ ಎಂದರೆ ಮನುಷ್ಯತ್ವ, ಮೊದಲು ಮನುಷ್ಯತ್ವ ಇರಬೇಕು ಎಂದು ಛೇಡಿಸಿದರು.