ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ನಡೆದಿದ್ದು ಡಿಸಿಎಂ ಡಿ.ಕೆ. ಶಿವಕುಮೃ ಅವರು ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕಮಾರ್ ಅವರು, ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.
ಪಶ್ಚಿಮ ವಲಯದ ಗಾಂಧಿನಗರ, ಮಲ್ಲೇಶ್ವರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಶೇಷಾದ್ರಿಪುರಂನ ಶಿರೂರ್ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ದಿನೇಶ್ ಗುಂಡೂರಾವ್, ಶ್ರೀ ಬಿ.ಝಡ್ ಜಮೀರ್ ಅಹ್ಮದ್ ಖಾನ್, ಮಲ್ಲೇಶ್ವರಂ ಶಾಸಕರಾದ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಮಾಜಿ ರಾಜ್ಯ ಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತರಾದ ಜಯರಾಮ್, ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.