ಬೆಂಗಳೂರು:– ರಾಜಧಾನಿ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ರಾಬರಿ ಮಾಡಿದ್ದ ಖತರ್ನಾಕ್ ಗ್ಯಾಂಗನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿ. ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿ ಕೆಮಿಕಲ್ ಇದ್ದ ಕರ್ಚಿಫ್ ಮುಖಕ್ಕೆ ಇಟ್ಟು ಬಳಿಕ ಕೈ-ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದರು. ಸದ್ಯ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್ನೊಂದಿಗೆ ಜನವರಿ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಳು. ಅನುಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು. ಘಟನೆ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ.