ಬೆಂಗಳೂರು: ಇನೇನು ಕೆಲವೇ ದಿನಗಳಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು ಕಾಂಗ್ರೆಸ್ನವರು ಕೂಡ ತಕರಾರು ತೆಗೆಯುತ್ತಿದ್ದರು ಈ ಮಧ್ಯೆ ರಾಮಮಂದಿರ ಉದ್ಘಾಟನೆಗೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ರಾಮ ಹಾಗೂ ಕೃಷ್ಣನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿಯಿದೆ ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆ ಬಗ್ಗೆ ನಾನು ಮಾತನಾಡಲ್ಲ ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ನಾನಿಲ್ಲ ನಾನು ದೈವಭಕ್ತಳು ಎಂದು ಪದೇಪದೇ ಹೇಳುತ್ತೇನೆ ಅಷ್ಟೇ
ರಾಮಮಂದಿರಕ್ಕೆ ಯಾವಾಗಾದ್ರೂ ಒಂದು ದಿನ ನಾನು ಹೋಗುತ್ತೇನೆ ಅಯೋಧ್ಯೆಯಲ್ಲಿರುವ ರಾಮ ಮಂದಿರ ದೇಶದ 140 ಕೋಟಿ ಜನರದ್ದು ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.