ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.