ಬೆಂಗಳೂರು:- ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ.
ವೃದ್ಧೆಯೊಬ್ಬರ ಮನೆಯ ಮೇಲೆ ಲೋನ್ ಪಡೆದು ಈ ಗ್ಯಾಂಗ್ನವರು ವಂಚನೆ ಎಸಗಿದ್ದರು. ವೃದ್ಧೆ ಮನೆ ಮಾರಾಟ ಮಾಡಿ ವಿದೇಶಕ್ಕೆ ತೆರಳಲು ತೀರ್ಮಾನಿದ್ದರು. ಈ ವಿಚಾರವನ್ನು ಪಕ್ಕದ ಮನೆಯ ನಿವಾಸಿ ಮಂಜುನಾಥ್ ಬಳಿ ಹೇಳಿಕೊಂಡಿದ್ದರು. ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಮಂಜುನಾಥ, ತನ್ನ ಸ್ನೇಹಿತರ ಜೊತೆಗೆ ಸೇರಿ ಲೋನ್ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣದ ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ಗಳ ಯಡವಟ್ಟು ಬಯಲಿಗೆ ಬಂದಿದೆ.