ಬೆಂಗಳೂರು: ಅಂಬೇಡ್ಕರ್ ಅವರು, ಹಿಂದೂ ಧರ್ಮದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋಗಿದ್ದರು. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಅವರು ಹೋಗಿಲ್ಲ ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು, ಹಿಂದೂ ಧರ್ಮದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋಗಿದ್ದರು. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಅವರು ಹೋಗಿಲ್ಲ.
ರಾಮಮಂದಿರದ ಅರ್ಚಕರಲ್ಲಿ 24 ಜನರ ಪೈಕಿ ಇಬ್ಬರು ದಲಿತರಿದ್ದಾರೆ. ಹಿಂದೂ ಧರ್ಮ ಬದಲಾಗುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಭವಿಷ್ಯ ಅಲ್ಪಸಂಖ್ಯಾತರ ಕೈಯಲ್ಲಿದೆ ಎಂದುಕೊಂಡು ಹಿಂದೂಗಳನ್ನ ನಿಂದಿಸುತ್ತಿದ್ದಾರೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯನ್ನು ಕಾಂಗ್ರೆಸ್ ಮನಬಂದಂತೆ ಟೀಕಿಸುತ್ತಿದೆ. ಕಾಂಗ್ರೆಸ್ನ ಈ ನಿಲುವನ್ನು ನಾನು ಖಂಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಮೊದಲು ವಿರೋಧಿಸಿದ್ದರು. ಜನ ಉತ್ತರ ಕೊಡಲು ಆರಂಭಿಸಿದ ಮೇಲೆ ಬದಲಾದರು ಇದನ್ನು ನಾನು ಮೆಚ್ಚುತ್ತೇನೆ ಎಂದರು.