ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯದಲ್ಲಿ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು
33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು.
ಈ ವೇಳೆ ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.