ಚೀನಾ:-ಚೀನಾದಲ್ಲಿ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ ಆಗಿದ್ದು, ದೆಹಲಿಯಲ್ಲೂ ಭೂಕಂಪನ ಆಗಿದೆ. ಈ ಹಿನ್ನೆಲೆ ಜನತೆ ಬೆಚ್ಚಿ ಬಿದ್ದಿದ್ದಾರೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ
ಸೋಮವಾರ ಬೆಳಿಗ್ಗೆ ಈಶಾನ್ಯ ಚೀನಾದ ಗುಡ್ಡಗಾಡು ಹಾಗೂ ಪರ್ವತ ಶ್ರೇಣಿಯಲ್ಲಿ ಭೂಕಂಪ ಸಂಭವಿಸಿದ್ದು, 47 ಮಂದಿ ಜೀವಂತ ಸಮಾಧಿಯಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿಯನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಪ್ರಸಾರಸಂಸ್ಥೆಗಳು ವರದಿ ಮಾಡಿವೆ. ಅಲ್ಲದೇ ದಿಢೀರ್ ಮಳೆ ಹಿನ್ನೆಲೆಯಲ್ಲಿ ಚೀನಾದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.