ಬೆಂಗಳೂರು:- ಕರ್ನಾಟಕದಾದ್ಯಂತ ಚಳಿ ತಗ್ಗಿದ್ದು, ಚಳಿ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ದಾಖಲಾಗಿದೆ.
ಕರ್ನಾಟಕದಾದ್ಯಂತ ಚಳಿ ಸ್ವಲ್ಪ ಕಡಿಮೆಯಾಗಿದ್ದು, ಗರಿಷ್ಠ ಉಷ್ಣಾಂಶ ಹೆಚ್ಚಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆಇರಲಿದೆ
ಬೆಳಗಾವಿ ಏರ್ಪೋರ್ಟ್ನಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.