ಬೆಂಗಳೂರು:- ನಿತೀಶ್ ಕುಮಾರ್ ಬಿಜೆಪಿಗೆ ಸೇರುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಐಎನ್ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ ಬಿರುಕು ಮೂಡಿರುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಐಎನ್ಡಿಐಎ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದು ಹೇಳಿದರು.
ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್ಡಿಐಎ ಒಕ್ಕೂಟ ಸಾಯುತ್ತಿದೆ. ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದರು.