ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದ್ದು ಹಾಗೆ ಈ ಬಾರಿ 3.80 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ ವಿಧಾನಪರಿಷತ್ ನಾಐಕ ಟಿ.ಎ.ಶರವಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.
2024-25ನೇ ಸಾಲಿನಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ ಕೋರಿ ಸನ್ಮಾನ್ಯ ಮುಖ್ಯಮಂತ್ರಿಗಳಾದಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಪತ್ರ ಸಲ್ಲಿಸಿದ ಪರಿಷತ್ ನಾಯಕ ಟಿ.ಎ. ಶರವಣ.