ಜೈಪುರ:– ರಾಜಸ್ಥಾನದ ಎಲ್ಲಾ ಶಾಲೆಗಳಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೆ ಶಾಲೆಗಳಲ್ಲಿ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗುವುದು ಎಂದಿದ್ದಾರೆ. ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗವನ್ನು ಆಧರಿಸಿ ವಸ್ತ್ರ ಸಂಹಿತೆ ನಿರ್ಧರಿಸಲಾಗುತ್ತದೆ. ಇನ್ನು ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್ಲಾಲ್ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಒತ್ತಾಯಿಸಿದ್ದಾರೆ.