ಲಕ್ನೋ: ಜ್ಞಾನವಾಪಿ ಮಸೀದಿಯ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ವಾರಣಾಸಿ ಹಿಂದೂಗಳಿಗೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ದೊಡ್ಡ ಜಯ ಇದಾಗಿದ್ದು, ಮುಂದಿನ 7 ದಿನಗಳಲ್ಲಿ ಮಸೀದಿಯ ನೆಲ ಮಹಡಿಯಲ್ಲಿ ಸಿಕ್ಕ ವಿಗ್ರಹಗಳಿಗೆ ಪೂಜೆ ಆರಂಭವಾಗಲಿದೆ.
ಮಸೀದಿಯ ಕೆಳಗಿರುವ 10 ಮೊಹರು ನೆಲಮಾಳಿಗೆಗಳಲ್ಲಿ ಹಿಂದೂ ಪೂಜೆಗಳು ಇನ್ನು 7 ದಿನಗಳಲ್ಲಿ ಪ್ರಾರಂಭವಾಗಲಿವೆ. ಇದಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಹಿಂದೂ ಕಡೆಯವರು ‘ವ್ಯಾಸ್ ಕಾ ತೆಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದಾರೆ. ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಿದೆ” ಎಂದು ಹಿಂದೂ ಪರ ಅರ್ಜಿದಾರರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಪುರಾತತ್ವ ಇಲಾಖೆ ಮಸೀದಿಯಲ್ಲಿ ಸರ್ವೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಮಂದಿರವನ್ನು ಕೆಡವಿ ಮಸೀದಿ ಕಟ್ಟಲಾಗಿಲ್ಲ, ಮಂದಿರದ ಮೇಲ್ಗಡೆ ಮಸೀದಿ ರಚನೆ ಮಾಡಲಾಗಿದೆ ಎಂದು ಸರ್ವೆ ವರದಿ ತಿಳಿಸಿತ್ತು. ವಾರಾಣಸಿಯ ನ್ಯಾಯಾಲಯವು ಬುಧವಾರದಂದು ಹಿಂದೂ ಧರ್ಮದವರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದೆ.