ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ಅ ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಿಗ್ಸ್ ಅಪ್ಡೇಟ್ ಹೊರಬಿದ್ದಿದೆ
ಅಗರ್ತಲಾ ಐಎಲ್ಎಸ್ ಆಸ್ಪತ್ರೆ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಮಯಾಂಕ್ ಅಗರ್ವಾಲ್, ಸದ್ಯ ವೈದ್ಯಕೀಯವಾಗಿ ಸ್ಥಿರವಾಗಿದ್ದಾರೆ. ಅವರನ್ನು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ