ನವದೆಹಲಿ: ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇನ್ನೂ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಹೇಳಿದರು.