ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕೂಗು ಬೇಡವೇ ಬೇಡ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್
ಕನ್ನಡ ಉಳಿವಿಗಾಗಿ ಎಲ್ಲರೂ ಒಗ್ಗೂಡಬೇಕು, ಕನ್ನಡವನ್ನು ಕಡೆಗಣಿಸುವಂತಹ ಯಾರೇ ಇದ್ದರೂ ನಾವು ಉಗ್ರ ಹೋರಾಟವನ್ನು ಮಾಡುತ್ತಿವೆಂದು ಎಚ್ಚರಿಕೆ ನೀಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆದರು.
ಇಂದಿನ ಬಜೆಟ್ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.