ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ನ್ನು ಪ್ರಧಾನಿ ನರೇಂದ್ರ ಮೋದಿಯವರುವಿನೂತನ ಬಜೆಟ್ ಎಂದು ಕರೆದಿದ್ದಾರೆ. ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬಜೆಟ್ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.
ಆದಾಯ ತೆರಿಗೆ ವಿನಾಯಿತಿಯಿಂದ ಮಧ್ಯಮ ವರ್ಗದ ಸುಮಾರು 1 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಈ ಬಜೆಟ್ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸಲು ಬಜೆಟ್ ಒತ್ತು ನೀಡುತ್ತದೆ. ಬಡವರಿಗೆ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಸಿಗಲಿದೆ ಎಂದಿದ್ದಾರೆ.