ನುಗ್ಗೇಕಾಯಿಯಯು ಅನೇಕ ರೋಗಗಳಿಗೆ ರಾಮಬಾಣವಾಗಿದೆ. ಆದರೆ ನುಗ್ಗೆ ಸೊಪ್ಪು ಉತ್ತಮ ಆಹಾರವಾಗಿದ್ದು ಹಲವು ತೊಂದರೆಗಳಿಗೆ ಸಮರ್ಥ ಔಷಧಿಯೂ ಆಗಿದೆ. ಇದು ರುಚಿಕರವೂ, ಹೆಚ್ಚಿನ ನಾರು ಹೊಂದಿರುವ ಸೊಪ್ಪೂ ಆಗಿರುವ ಕಾರಣ ದಕ್ಷಿಣ ಭಾರತದಲ್ಲಿ ಸಾಂಬಾರ್ ಅಥವಾ ಪಲ್ಯದಲ್ಲಿ ಹೆಚ್ಚಾಗಿ ಉಪಯೋಗಿಸುತ್ತಾರೆ.
ನುಗ್ಗೆಕಾಯಿಯಂತೆ ನುಗ್ಗೆ ಸೊಪ್ಪಿನಲ್ಲಿಯೂ ಹಲವಾರು ಆಂಟಿ ಆಕ್ಸಿಡೆಂಟುಗಳೂ ಮತ್ತು ಇತರ ಅಗತ್ಯ ಪೋಷಕಾಂಶಗಳೂ ಲಭ್ಯವಿದ್ದು ಮುಖ್ಯವಾಗಿ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸುವಲ್ಲಿ ಹಾಗೂ ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ.
ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನ ಮನೆ ಮದ್ದುಗಳು ಇಲ್ಲಿದೆ
* ನುಗ್ಗೆ ಸೊಪ್ಪಿನಿಂದ ಸಾರು ತಯಾರಿಸಿ, ಅದಕ್ಕೆ ಬೆಳ್ಳುಳ್ಳಿ ರಸ ಬೆರೆಸಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ.
* ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಕುಡಿಯುತ್ತಿದ್ದರೆ ಮಲಬದ್ಧತೆ ಸಮಸ್ಯೆ ಯೂ ದೂರವಾಗುತ್ತದೆ.
* ನುಗ್ಗೆಸೊಪ್ಪು, ಹೆಚ್ಚಿದ ಶುಂಠಿ, ಹರಳು ಗಿಡದ ಎಲೆ, ತುಳಸಿ ಎಲೆಗಳನ್ನು ಎಳ್ಳೆಣ್ಣೆಯಲ್ಲಿ ಹುರಿದು ಬಟ್ಟೆಯಲ್ಲಿ ಕಟ್ಟಿ ಬೆನ್ನುನೋವು ಇರುವ ಜಾಗಕ್ಕೆ ಬಿಸಿ ಶಾಖವಿಟ್ಟರೆ ಬೆನ್ನುನೋವು ಕಡಿಮೆಯಾಗುತ್ತದೆ.
* ನುಗ್ಗೆಸೊಪ್ಪು, ತುಳಸಿ ಎಲೆಗಳನ್ನು ಹುರಿದು ಕೀಲುನೋವಿರುವ ಜಾಗಕ್ಕೆ ಶಾಖವನ್ನು ಕೊಟ್ಟರೆ ನೋವು ನಿವಾರಣೆಯಾಗುತ್ತದೆ.
* ತಲೆ ನೋವಿನಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ಒಂದು ತೊಟ್ಟು ರಸವನ್ನು ಕಿವಿಗೆ ಹಾಕುತ್ತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
* ನುಗ್ಗೆ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ರಸ ತೆಗೆದು ಅದಕ್ಕೆ ಅಡಿಗೆ ಉಪ್ಪು ನಿಂಬೆರಸ, ಕಾಳು ಮೆಣಸಿನ ಪುಡಿಯನ್ನು ಬೆರೆಸಿ ಪ್ರತಿದಿನ ಬೆಳಗ್ಗೆ ಸೇವಿಸಿದರೆ ಸಂಭೋಗದ ಶಕ್ತಿಯು ವೃದ್ಧಿಯಾಗುತ್ತದೆ.
* ನುಗ್ಗೆ ಸೊಪ್ಪನ್ನು ನುಣ್ಣಗೆ ರುಬ್ಬಿ ಮೂಲವ್ಯಾಧಿ ಮೊಳಕೆಗಳಿಗೆ ಹಚ್ಚುವುದರಿಂದ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
* ಬೇಯಿಸಿ ತೆಗೆದ ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಸಕ್ಕರೆ ಬೆರೆಸಿ ಮಕ್ಕಳಿಗೆ ಕುಡಿಸುವುದರಿಂದ ರಕ್ತವು ಶುದ್ಧಿಯಾಗುತ್ತದೆ.
* ನುಗ್ಗೆ ಸೊಪ್ಪನ್ನು ಬೇಯಿಸಿ ರಸ ತೆಗೆದು ಅದಕ್ಕೆ ನಿಂಬೆರಸ ಹಿಂಡಿ ಒಂದು ವಾರಗಳ ಕಾಲ ಸೇವಿಸಿದರೆ ತಲೆಸುತ್ತುವ ಸಮಸ್ಯೆಯೂ ದೂರವಾಗುತ್ತದೆ.