ಬೆಂಗಳೂರು:- ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ 50 ರೂಪಾಯಿ ಸಂಗ್ರಹ ವಿಚಾರವಾಗಿ ಶಿಕ್ಷಣ ಇಲಾಖೆ ಸಮರ್ಥಿಸಿಕೊಂಡಿದ್ದಾರೆ. 2023ರ ಫೆಬ್ರವರಿಯಲ್ಲಿ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸಲು ಸರ್ಕಾರ ಆದೇಶಿಸಿದೆ ಎಂದು ಪರೋಕ್ಷವಾಗಿ ಬಿಜೆಪಿ ಅವಧಿಯಲ್ಲಿ ಆದೇಶವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟನೆ ನೀಡಿದೆ.
ಕಳೆದ 4 ವರ್ಷಗಳಿಂದಲೂ ಈ ಶುಲ್ಕ ಇದೆ. ಪರೀಕ್ಷೆ ನಡೆಸಲು ಖರ್ಚು ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಯಿಂದ 50 ರೂ. ಸಂಗ್ರಹ ಮಾಡಲಾಗುತ್ತೆ ಎಂದು ಸ್ಪಷ್ಟಿಕರಣ ನೀಡಿದೆ. ಈ ವಿಚಾರವಾಗಿ ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, 50 ರೂಪಾಯಿ ತೆಗೆದುಕೊಳ್ಳುವ ನಿಯಮ ಮಾಡಿದ್ದು ಬಿಜೆಪಿಯವರೇ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ್ದು. ಹೆಚ್.ಡಿ.ಕುಮಾರಸ್ವಾಮಿ ಮೊದಲು ಬಿಜೆಪಿಯವರನ್ನು ಪ್ರಶ್ನೆ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ. 2 ಸಾವಿರ ರೂ. ಜೆಡಿಎಸ್, ಬಿಜೆಪಿಯವರೇ ಪಡೆಯುತ್ತಿದ್ದಾರೆ ಅಲ್ವಾ. ಬಿಜೆಪಿ, ಜೆಡಿಎಸ್ನವರಿಗೆ ಜಾಸ್ತಿ ಗ್ಯಾರಂಟಿ ಹೋಗ್ತಿರೋದು. ಅದರ ಬಗ್ಗೆ ಚರ್ಚೆ ಮಾಡಲು ಹೆಚ್.ಡಿ.ಕುಮಾರಸ್ವಾಮಿಗೆ ಕೇಳುತ್ತೇನೆ ಎಂದು ಕಿಡಿಕಾರಿದ್ದಾರೆ.