ಬೆಂಗಳೂರು: ಸಂಸದ ಡಿ.ಕೆ. ಸುರೇಶ್, “ಭಾರತ ವಿಭಜನೆ” ಬಗ್ಗೆ ಮಾತನಾಡಿದ್ದರು. ಇದಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗುತ್ತಲೇ ಇವೆ ಬಿಜೆಪಿ ಕಾರ್ಯಕರ್ತರು ಡಿ.ಕೆ. ಬ್ರದರ್ಸ್ ಮನೆಗೆ ಮುತ್ತಿಗೆ ಹಾಕಲಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆ ಅವರ ನಿವಾಸದ ಬಳಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಆಗಮಿಸುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಮನೆಯ ಸ್ವಲ್ಪ ದೂರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸುಮಾರು 35ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡ ಬಿಜೆಪಿ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಹೀಗಾಗಿ ಬಿಜೆಪಿ ಯುವ ಮುಖಂಡರಾದ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.