ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಮಿತ್ ಶಾ ಇದೇ ಫೆಬ್ರವರಿ 9 ಮತ್ತು 10ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆಅಮಿತ್ ಶಾ ಆಗಮಿಸಲಿದ್ದಾರೆ. ಫೆ.10 ಶನಿವಾರ ಸಂಜೆ 5 ಗಂಟೆಗೆ ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾನಮೂರು ಶಿವಶಂಕರಪ್ಪ ಅತಿಥಿಗೃಹವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲೇ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಹಿಸಲಿದ್ದರೆ ಹೆಚ್ಡಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ, ವಿಜಯೇಂದ್ರ, ಸಿಟಿ ರವಿ, ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.