ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರನ್ನು ಜೆಡಿಎಸ್ ನೂತನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಅಲ್ಲದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಹ ಉಸ್ತುವಾರಿಯನ್ನಾಗಿ ಟಿ.ಎ. ಶರವಣ ಅವರನ್ನು ನೇಮಿಸಲಾಗಿದೆ
ತಮಗೆ ಈ ಜವಾಬ್ದಾರಿಯುತ ಹುದ್ದೆಗಳನ್ನು ನೀಡಿರುವುದಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ .ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿರುತ್ತೇನೆ.
ಹಾಗೆ ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾನೆ ಎಂದು ಟಿ.ಎ. ಶರವಣ ಅವರು ಹೇಳಿದ್ದಾರೆ