ನಿನ್ನೆ ಗ್ರ್ಯಾಮಿ ಪ್ರಶಸ್ತಿಯನ್ನು ಸ್ವೀಕರಿಸಿದ ಭಾರತದ ಸಂಗೀತಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಧಕರ ಸಾಧನೆಯನ್ನು ಪ್ರಧಾನಿ ಸ್ಮರಿಸಿದ್ದಾರೆ. ಕಳೆದ ವರ್ಷವೂ ಪ್ರಶಸ್ತಿ ಪಡೆದಿದ್ದ ರಿಕ್ಕಿ ಕೇಜ್ ಗೂ ಪ್ರಧಾನ ಅಭಿನಂದನೆ ಸಲ್ಲಿಸಿದ್ದರು.
ನಿನ್ನೆಯಷ್ಟೇ 66ನೇ ಸಾಲಿನ ಗ್ರ್ಯಾಮಿ ಅವಾರ್ಡ್ ಪ್ರಶಸ್ತಿ ಪ್ರಕಟವಾಗಿದ್ದು, ಭಾರತಕ್ಕೆ ಮೂರು ಪ್ರಶಸ್ತಿಗಳು ಸಂದಿವೆ. ದಿ ಮೂಮೆಂಟ್ ಆಲ್ಬಂಗಾಗಿ ಖ್ಯಾತ ಸಂಗೀತಗಾರ ಜಾಕಿರ್ ಹುಸೇನ್ ಅವರ ಬ್ಯಾಂಡ್ ಶಕ್ತಿಗೆ ಪ್ರಶಸ್ತಿ ಬಂದಿದ್ದು, ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಆಲ್ಬಂನಲ್ಲಿ ಈ ಪ್ರಶಸ್ತಿ ಸಂದಿದೆ.
ರಾಕೇಶ್ ಚೌರಾಸಿಯಾಗೆ ಎರಡು ಗ್ರ್ಯಾಮಿ ಅವಾರ್ಡ್ ದೊರಕಿದ್ದು, ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್ ಹಾಗೂ ವಾದ್ಯಗಳ ವಿಭಾಗದಲ್ಲಿ ಈ ಎರಡು ಪ್ರಶಸ್ತಿಗಳನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಇನ್ನೂ ಹಲವಾರು ಪ್ರಶಸ್ತಿಗಳು ಬೇರೆ ಬೇರೆ ಸಂಗೀತಗಾರರು ಪಡೆದುಕೊಂಡಿದ್ದಾರೆ.