ನವದೆಹಲಿ: ಕೇಂದ್ರ ಸರಕಾರದ ಅನುದಾನ ಹಂಚಿಕೆ ತಾರತಮ್ಯ ವಿರೋಧಿಸಿ ಕರ್ನಾಟಕ ಸರಕಾರವು ದೆಹಲಿಯ ಜಂತರ್ ಮಂಥರ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಎಲ್ಲಾ ಸಚಿವರು , ಶಾಸಕರು ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್ ಕೆ ಪಾಟೀಲ್, ಡಾ. ಜಿ ಪರಮೇಶ್ವರ, ರಾಮಲಿಂಗಾ ರೆಡ್ಡಿ, ಕೆ ಎಚ್ ಮುನಿಯಪ್ಪ ಸೇರಿದಂತೆ ಸಚಿವರು,
ಶಾಸಕರು, ಮೇಲ್ಮನೆ ಸದಸ್ಯರು, ಕಾಂಗ್ರೆಸ್ ಮುಂಚೂಣಿ ಘಟಕಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಎಂ, ಡಿಸಿಎಂ ಮತ್ತಿತರರು ಮಾತನಾಡಿದರು.
ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ.