ಕರಾವಳಿ, ಉಡುಪಿ ಜಿಲ್ಲೆಯಲ್ಲಿ ನಕ್ಸಲರು ಓಡಾಡಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಎನ್ ಎಫ್ ಹೈಲಿಲರ್ಟ್ ಆಗಿದೆ. ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣವಾಗಿ ಕ್ಷೀಣಿಸಿದ್ದು, ಉಡುಪಿ ಜಿಲ್ಲೆಯಲ್ಲಿ ನಕ್ಸಲರು ಓಡಾಡಿದ್ದಾರೆಂಬ ಸುದ್ದಿ,
ಹರಿದಾಡುತ್ತಿದ್ದಂತೆ ಜಿಲ್ಲೆಯ ಶೃಂಗೇರಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಎಎನ್ಎಎಫ್ ತಂಡ ಕಟ್ಟೆಚ್ಚರ ವಹಿಸಿದೆ ಎನ್ನಲಾಗುತ್ತಿದೆ. ಆದರೆ ಈ ಸಂಬಂಧ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ನಕ್ಸಲ್ ನಾಯಕ ಸಾಕೇತ್ ರಾಜನ್ ಸಾವಿಗೆ ರೆಡ್ ಸೆಲ್ಯೂಟ್ ದಿನ ಆಚರಿಸಬಹುದೆಂಬ ಹಿನ್ನೆಲೆಯಲ್ಲಿ ಮಲೆನಾಡು ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎನ್ನಲಾಗುತ್ತಿದೆ.